ಬೀದರ್‌ನ ‘ಕರ್ನಾಟಕ ಪಶುವೈದ್ಯಕೀಯ, ಪ್ರಾಣಿ ಮತ್ತು ಮೀನುಗಾರಿಕೆ ವಿಜ್ಞಾನ ವಿಶ್ವವಿದ್ಯಾಲಯ’ವು (KVAFSU) ಖಾಲಿ ಇರುವ ಬೋಧಕ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದೆ.
ಕಲ್ಯಾಣ ಕರ್ನಾಟಕ ವೃಂದ ಮತ್ತು ಉಳಿಕೆ ಮೂಲ ವೃಂದದ ಅಡಿಯಲ್ಲಿ ಪ್ರಾಧ್ಯಾಪಕ, ಸಹ ಪ್ರಾಧ್ಯಾಪಕ ಹಾಗೂ ಸಹಾಯಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಒಟ್ಟು 96 ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಜೂನ್ 20, 2026 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ಸಂಕ್ಷಿಪ್ತ ವಿವರ:
- ನೇಮಕಾತಿ ಸಂಸ್ಥೆ: ಕರ್ನಾಟಕ ಪಶುವೈದ್ಯಕೀಯ, ಪ್ರಾಣಿ ಮತ್ತು ಮೀನುಗಾರಿಕೆ ವಿಜ್ಞಾನ ವಿಶ್ವವಿದ್ಯಾಲಯ (KVAFSU)
- ಒಟ್ಟು ಹುದ್ದೆಗಳ ಸಂಖ್ಯೆ; 96
- ಉದ್ಯೋಗ ಸ್ಥಳ: ಬೀದರ್
ಹುದ್ದೆಗಳ ವಿವರ:
- ಪ್ರಾಧ್ಯಾಪಕರು – 20 ಹುದ್ದೆಗಳು
- ಸಹ ಪ್ರಾಧ್ಯಾಪಕರು – 22 ಹುದ್ದೆಗಳು
- ಸಹಾಯಕ ಪ್ರಾಧ್ಯಾಪಕರು – 54 ಹುದ್ದೆಗಳು
ವೇತನ ಶ್ರೇಣಿಯ ವಿವರ:
- ಪ್ರಾಧ್ಯಾಪಕರು – ರೂ. 1,44,200 ರಿಂದ 2,18,200/-
- ಸಹ ಪ್ರಾಧ್ಯಾಪಕರು – ರೂ. 1,31,400 ರಿಂದ 2,17,100/-
- ಸಹಾಯಕ ಪ್ರಾಧ್ಯಾಪಕರು – ರೂ. 57,700 ರಿಂದ 1,82,400/-
ಶೈಕ್ಷಣಿಕ ಅರ್ಹತೆ:
- ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸಂಬಂಧಿತ ವಿಭಾಗದಲ್ಲಿ ಪದವಿ, ಕನಿಷ್ಠ 55% ಅಂಕಗಳೊಂದಿಗೆ ಸ್ನಾತಕೋತ್ತರ ಪದವಿ ಮತ್ತು ಪಿಎಚ್‌ಡಿ (Ph.D) ಪೂರ್ಣಗೊಳಿಸಿರಬೇಕು.
- ಹುದ್ದೆಗಳಿಗೆ ಅನುಗುಣವಾಗಿ ಬೋಧನೆ ಹಾಗೂ ಸಂಶೋಧನಾ ವಿಭಾಗದಲ್ಲಿ 8 ರಿಂದ 10 ವರ್ಷಗಳ ಅನುಭವ ಹೊಂದಿರಬೇಕು. ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ NET/SLET/SET ತೇರ್ಗಡೆಯಾಗಿರಬೇಕು.
- ಎಸ್‌ಎಸ್‌ಎಲ್‌ಸಿಯಲ್ಲಿ (SSLC) ಕನ್ನಡವನ್ನು ಒಂದು ಭಾಷೆಯಾಗಿ ಓದದ ಅಭ್ಯರ್ಥಿಗಳು, ಕಡ್ಡಾಯವಾಗಿ 150 ಅಂಕಗಳ ಕನ್ನಡ ಭಾಷಾ ಪರೀಕ್ಷೆಯನ್ನು ಬರೆದು ಅದರಲ್ಲಿ ಶೇ. 50% ಅಂಕಗಳೊಂದಿಗೆ ಉತ್ತೀರ್ಣರಾಗಬೇಕು.
ವಯೋಮಿತಿ:
- ಕೇವಲ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ – ಸಾಮಾನ್ಯ ವರ್ಗದ ಅಭ್ಯರ್ಥಿಗಳ ಗರಿಷ್ಠ ವಯಸ್ಸು 40 ವರ್ಷಗಳು ಮೀರಿರಬಾರದು.
- ಪ್ರವರ್ಗ 2A, 2B, 3A, 3B ಅಭ್ಯರ್ಥಿಗಳಿಗೆ 43 ವರ್ಷಗಳು ಹಾಗೂ SC, ST, ಪ್ರವರ್ಗ-1 ರ ಅಭ್ಯರ್ಥಿಗಳಿಗೆ 45 ವರ್ಷಗಳವರೆಗೆ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ.
ಅರ್ಜಿ ಶುಲ್ಕ:
- ಸಾಮಾನ್ಯ ಮತ್ತು ಪ್ರವರ್ಗ 2A, 2B, 3A, 3B ಅಭ್ಯರ್ಥಿಗಳಿಗೆ – ರೂ. 1000/-
- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1 ರ ಅಭ್ಯರ್ಥಿಗಳಿಗೆ – ರೂ. 500/-
- ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕು.
ಆಯ್ಕೆ ಪ್ರಕ್ರಿಯೆ:
- ಶೈಕ್ಷಣಿಕ ಅಂಕಗಳು (Score card), ದಾಖಲೆಗಳ ಪರಿಶೀಲನೆ ಹಾಗೂ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಅಂತಿಮವಾಗಿ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ:
- ಅಭ್ಯರ್ಥಿಗಳು ಮೊದಲಿಗೆ KVAFSU ನ ಅಧಿಕೃತ ವೆಬ್‌ಸೈಟ್‌ಗೆ (www.kvafsu.edu.in) ಭೇಟಿ ನೀಡಿ, ‘ರಿಕ್ರೂಟ್‌ಮೆಂಟ್ ಪೋರ್ಟಲ್’ನಲ್ಲಿ ರಿಜಿಸ್ಟರ್ ಆಗಬೇಕು.
- ಆನ್‌ಲೈನ್ ಅರ್ಜಿಯಲ್ಲಿ ಕೇಳಲಾಗಿರುವ ಎಲ್ಲಾ ಮಾಹಿತಿಯನ್ನು ಹಾಗೂ ತಮ್ಮ ಸಂಶೋಧನಾ ಪ್ರಕಟಣೆಗಳ (research publications) ವಿವರಗಳನ್ನು ನಿಖರವಾಗಿ ಭರ್ತಿ ಮಾಡಬೇಕು.
- ಇತ್ತೀಚಿನ ಭಾವಚಿತ್ರ, ಸಹಿ, ಜಾತಿ ಪ್ರಮಾಣಪತ್ರ ಮತ್ತು ಶೈಕ್ಷಣಿಕ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್‌ಲೋಡ್ ಮಾಡಬೇಕು.
- ನಿಗದಿತ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಿ, ಅರ್ಜಿಯನ್ನು ಸಲ್ಲಿಸಬೇಕು.
- ಭವಿಷ್ಯದ ಉಲ್ಲೇಖಕ್ಕಾಗಿ ಹಾಗೂ ಮೂಲ ದಾಖಲೆಗಳ ಪರಿಶೀಲನೆಯ ಸಂದರ್ಭದಲ್ಲಿ ಖುದ್ದಾಗಿ ಸಲ್ಲಿಸಲು ಅರ್ಜಿ ನಮೂನೆಯ ಪ್ರಿಂಟ್ ತೆಗೆದುಕೊಳ್ಳಬೇಕು.
ಪ್ರಮುಖ ದಿನಾಂಕಗಳು:
ಆನ್‌ಲೈನ್ ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ: 22-05-2026 (ಬೆಳಿಗ್ಗೆ 10:00 ಗಂಟೆಗೆ).
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20-06-2026 .
ಪ್ರಮುಖ ಲಿಂಕ್‌ಗಳು:
ಅಧಿಕೃತ ಅಧಿಸೂಚನೆ: ಡೌನ್‌ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್‌ಸೈಟ್: kvafsu.edu.in
ಇತರೆ ಉದ್ಯೋಗ ಮಾಹಿತಿಗಳನ್ನು ಓದಿರಿ
Indian Army Recruitment 2026: ವೇತನ 56,100 ರೂ. ಅರ್ಹರು ಅರ್ಜಿ ಸಲ್ಲಿಸಿ