ಮೈಸೂರಿನ CFTRI ನೇಮಕಾತಿ 2026: ಪ್ರಾಜೆಕ್ಟ್ ಅಸೋಸಿಯೇಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೇಂದ್ರ ಸರ್ಕಾರದ ಕೌನ್ಸಿಲ್ ಆಫ್ ಸೈಂಟಿಫಿಕ್ & ಇಂಡಸ್ಟ್ರಿಯಲ್ ರಿಸರ್ಚ್ (CSIR) ನ ಅಂಗಸಂಸ್ಥೆಯಾಗಿರುವ, ಮೈಸೂರಿನ ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆ (CFTRI) ಯು ಪ್ರಾಜೆಕ್ಟ್ ಅಸೋಸಿಯೇಟ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಿದೆ.

‘ಪ್ರಾಜೆಕ್ಟ್ ಅಸೋಸಿಯೇಟ್-I’ (PAT-I) ಹುದ್ದೆಗಳಿಗೆ ತಾತ್ಕಾಲಿಕ ಗುತ್ತಿಗೆ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ಮೇ 14, 2026 ರೊಳಗೆ ಅಧಿಕೃತ ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ಸಂಕ್ಷಿಪ್ತ ವಿವರ:

  • ನೇಮಕಾತಿ ಸಂಸ್ಥೆ: ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆ (CFTRI)
  • ಹುದ್ದೆಯ ಹೆಸರು: ಪ್ರಾಜೆಕ್ಟ್ ಅಸೋಸಿಯೇಟ್-I
  • ಹುದ್ದೆಗಳ ಸಂಖ್ಯೆ: 02
  • ವೇತನ ಶ್ರೇಣಿ: ಮಾಸಿಕ ರೂ. 25,000/-
  • ಉದ್ಯೋಗ ಸ್ಥಳ: ಮೈಸೂರು

ಶೈಕ್ಷಣಿಕ ಅರ್ಹತೆ (Educational Qualification):

  • ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕಡ್ಡಾಯವಾಗಿ ಆಹಾರ ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಎಂ.ಎಸ್ಸಿ (MSc. in Food Science and Technology) ಅಥವಾ ತತ್ಸಮಾನ ಪದವಿಯನ್ನು ಪೂರ್ಣಗೊಳಿಸಿರಬೇಕು.

ವಯೋಮಿತಿ:

  • ಅರ್ಜಿ ಸ್ವೀಕರಿಸುವ ಕೊನೆಯ ದಿನಾಂಕಕ್ಕೆ (ಅಂದರೆ 14.05.2026 ಕ್ಕೆ) ಅನ್ವಯವಾಗುವಂತೆ, ಅಭ್ಯರ್ಥಿಯ ಗರಿಷ್ಠ ವಯಸ್ಸು 35 ವರ್ಷಗಳುಮೀರಿರಬಾರದು.
  • ವಯೋಮಿತಿ ಸಡಿಲಿಕೆ: SC/ST/PwBD ಹಾಗೂ ಮಹಿಳಾ ಅಭ್ಯರ್ಥಿಗಳಿಗೆ 05 ವರ್ಷ ಮತ್ತು OBC ಅಭ್ಯರ್ಥಿಗಳಿಗೆ 03 ವರ್ಷಗಳ ವಯೋಮಿತಿ ಸಡಿಲಿಕೆ ಇರುತ್ತದೆ.

ಅರ್ಜಿ ಶುಲ್ಕ:

  • ಈ ನೇಮಕಾತಿಗೆ ಯಾವುದೇ ಅರ್ಜಿ ಶುಲ್ಕ ವಿಧಿಸಲಾಗಿಲ್ಲ.

ಪ್ರಮುಖ ದಿನಾಂಕಗಳು:

  • ಅಧಿಸೂಚನೆ ಬಿಡುಗಡೆಯಾದ ದಿನಾಂಕ: 30-04-2026
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 14-05-2026

ಪ್ರಮುಖ ಲಿಂಕ್‌ಗಳು:

SSC ಸ್ಟೆನೋಗ್ರಾಫರ್ ನೇಮಕಾತಿ 2026

ಮೈಸೂರು ಜಿಲ್ಲಾ ನ್ಯಾಯಾಲಯ ನೇಮಕಾತಿ 2026

Leave a Comment