KEA Recruitment 2026: 06 ಪ್ರಥಮ ಮತ್ತು ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ತನ್ನ ಉಳಿಕೆ ಮೂಲ ವೃಂದದಲ್ಲಿ ಖಾಲಿಯಿರುವ ಗ್ರೂಪ್-ಸಿ ವೃಂದದ ನೇರ ನೇಮಕಾತಿ ಹುದ್ದೆಗಳನ್ನು ಭರ್ತಿ ಮಾಡಲು ಅಧಿಕೃತ ಅಧಿಸೂಚನೆ ಹೊರಡಿಸಿದೆ.

ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಪ್ರಥಮ ದರ್ಜೆ ಸಹಾಯಕ ಹಾಗೂ ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪಿಯುಸಿ ಮತ್ತು ಪದವಿ ಪೂರ್ಣಗೊಳಿಸಿರುವ ಕರ್ನಾಟಕದ ಉದ್ಯೋಗಾಕಾಂಕ್ಷಿಗಳು ಜೂನ್ 03, 2026 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ಸಂಕ್ಷಿಪ್ತ ವಿವರ:

  • ನೇಮಕಾತಿ ಸಂಸ್ಥೆ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA)
  • ಒಟ್ಟು ಹುದ್ದೆಗಳ ಸಂಖ್ಯೆ: 06
  • ಉದ್ಯೋಗ ಸ್ಥಳ: ಕರ್ನಾಟಕ

ಹುದ್ದೆಗಳ ವಿವರ:

  • ಪ್ರಥಮ ದರ್ಜೆ ಸಹಾಯಕ – 02 ಹುದ್ದೆಗಳು
  • ದ್ವಿತೀಯ ದರ್ಜೆ ಸಹಾಯಕ – 04 ಹುದ್ದೆಗಳು

ವೇತನ ಶ್ರೇಣಿಯ ವಿವರ:

  • ಪ್ರಥಮ ದರ್ಜೆ ಸಹಾಯಕ – ಮಾಸಿಕ ರೂ. 44,425 ದಿಂದ ರೂ. 83,700/-
  • ದ್ವಿತೀಯ ದರ್ಜೆ ಸಹಾಯಕ – ಮಾಸಿಕ ರೂ. 34,100 ದಿಂದ ರೂ. 67,700/-

ಶೈಕ್ಷಣಿಕ ಅರ್ಹತೆ:

  • ಪ್ರಥಮ ದರ್ಜೆ ಸಹಾಯಕ: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕಡ್ಡಾಯವಾಗಿ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
  • ದ್ವಿತೀಯ ದರ್ಜೆ ಸಹಾಯಕ: ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆಯಲ್ಲಿ ಉತ್ತೀರ್ಣರಾಗಿರಬೇಕು.

ವಯೋಮಿತಿ:

  • ಅಭ್ಯರ್ಥಿಯು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು ಹಾಗೂ ಗರಿಷ್ಠ 40 ವರ್ಷ ವಯಸ್ಸು ಮೀರಿರಬಾರದು.
  • ವಯೋಮಿತಿ ಸಡಿಲಿಕೆ: ಪ್ರವರ್ಗ 2A, 2B, 3A, 3B ಅಭ್ಯರ್ಥಿಗಳಿಗೆ 03 ವರ್ಷಗಳು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಅಭ್ಯರ್ಥಿಗಳಿಗೆ 05 ವರ್ಷಗಳ ಸಡಿಲಿಕೆ ಇರುತ್ತದೆ.

ಅರ್ಜಿ ಶುಲ್ಕ:

  • ಸಾಮಾನ್ಯ, ಪ್ರವರ್ಗ 2A, 2B, 3A, 3B ಅಭ್ಯರ್ಥಿಗಳಿಗೆ: ರೂ. 750/-
  • ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, ಮಾಜಿ ಸೈನಿಕ ಅಭ್ಯರ್ಥಿಗಳಿಗೆ: ರೂ. 500/-
  • ವಿಕಲಚೇತನ ಅಭ್ಯರ್ಥಿಗಳಿಗೆ: ರೂ. 250/-

ಆಯ್ಕೆ ಪ್ರಕ್ರಿಯೆ:

  • ಅರ್ಹ ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸುವ ಮೂಲಕ ನೇರ ನೇಮಕಾತಿ ಮಾಡಿಕೊಳ್ಳಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ:

  1. ಅಭ್ಯರ್ಥಿಗಳು ಮೊದಲಿಗೆ ಕೆಇಎ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಕೊಳ್ಳಬೇಕು.
  2. ಆನ್‌ಲೈನ್ ಅರ್ಜಿ ಲಿಂಕ್ ಮೇಲೆ ಕ್ಲಿಕ್ ಮಾಡಿ, ಕೇಳಲಾಗಿರುವ ಎಲ್ಲಾ ನಿಖರ ಮಾಹಿತಿಗಳನ್ನು ಭರ್ತಿ ಮಾಡಬೇಕು.
  3. ನಿಮ್ಮ ಶೈಕ್ಷಣಿಕ ಅಂಕಪಟ್ಟಿಗಳು, ವಯಸ್ಸಿನ ಪುರಾವೆ, ಜಾತಿ ಪ್ರಮಾಣಪತ್ರ ಮತ್ತು ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ಛಾಯಾಚಿತ್ರವನ್ನು ಸ್ಕ್ಯಾನ್ ಮಾಡಿ ಅಪ್‌ಲೋಡ್ ಮಾಡಬೇಕು.
  4. ನಿಗದಿತ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಿ ಅಂತಿಮವಾಗಿ ಅರ್ಜಿಯನ್ನು ಸಲ್ಲಿಸಬೇಕು. ಭವಿಷ್ಯದ ಉಲ್ಲೇಖಕ್ಕಾಗಿ ಅರ್ಜಿ ಸಂಖ್ಯೆಯನ್ನು ಬರೆದಿಟ್ಟುಕೊಳ್ಳಿ.

ಪ್ರಮುಖ ದಿನಾಂಕಗಳು: 
ಆನ್‌ಲೈನ್ ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ: 20-05-2026.
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 03-06-2026.
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 04-06-2026.

ಪ್ರಮುಖ ಲಿಂಕ್‌ಗಳು: 
ಅಧಿಕೃತ ಅಧಿಸೂಚನೆ: ಡೌನ್‌ಲೋಡ್
ಆನ್‌ಲೈನ್‌ ಅರ್ಜಿ: Apply ಮಾಡಿ
ಅಧಿಕೃತ ವೆಬ್‌ಸೈಟ್: cetonline.karnataka.gov.in

NIELIT ನಲ್ಲಿ 75 ಪ್ರಾಧ್ಯಾಪಕ, ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಆಫ್‌ಲೈನ್ ಅರ್ಜಿ ಆಹ್ವಾನ

ರೈಲ್‌ಟೆಲ್ ನೇಮಕಾತಿ 2026

Leave a Comment