ಭಾರತ ಸರ್ಕಾರದ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಅಡಿಯಲ್ಲಿ ಬರುವ ‘ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ’ವು (NHAI) ಖಾಲಿ ಇರುವ ತಾಂತ್ರಿಕ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ.
ನೇರ ನೇಮಕಾತಿಯ ಮೂಲಕ 60 ಡೆಪ್ಯುಟಿ ಮ್ಯಾನೇಜರ್ – ತಾಂತ್ರಿಕ (Deputy Manager – Technical) ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ನೇಮಕಾತಿಯನ್ನು ಗೇಟ್-2026 (GATE-2026) ಸ್ಕೋರ್ನ ಆಧಾರದ ಮೇಲೆ ಮಾಡಲಾಗುತ್ತಿದ್ದು, ಸಿವಿಲ್ ಇಂಜಿನಿಯರಿಂಗ್ ಪೂರ್ಣಗೊಳಿಸಿರುವ ಅರ್ಹ ಅಭ್ಯರ್ಥಿಗಳು ಜೂನ್ 15, 2026 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ಸಂಕ್ಷಿಪ್ತ ವಿವರ:
- ನೇಮಕಾತಿ ಸಂಸ್ಥೆ: ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI)
- ಹುದ್ದೆಯ ಹೆಸರು: ಉಪ ವ್ಯವಸ್ಥಾಪಕ – ತಾಂತ್ರಿಕ
- ಒಟ್ಟು ಹುದ್ದೆಗಳ ಸಂಖ್ಯೆ: 60
- ವೇತನ ಶ್ರೇಣಿ: 56,100 ರಿಂದ 1,77,500 ರೂ.
- ಉದ್ಯೋಗ ಸ್ಥಳ: All India
ಹುದ್ದೆಗಳ ವರ್ಗೀಕರಣ:
- ಒಟ್ಟು 60 ಹುದ್ದೆಗಳನ್ನು ಮೀಸಲಾತಿವಾರು ವಿಭಜಿಸಲಾಗಿದೆ: UR-26, SC-09, ST-04, OBC(NCL)-16, EWS-05. (ಇದರಲ್ಲಿ 04 ಹುದ್ದೆಗಳನ್ನು ಅಂಗವಿಕಲರಿಗೆ (PwBD) ಮೀಸಲಿಡಲಾಗಿದೆ).
ಶೈಕ್ಷಣಿಕ ಅರ್ಹತೆ:
- ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಕಡ್ಡಾಯವಾಗಿ ಸಿವಿಲ್ ಇಂಜಿನಿಯರಿಂಗ್ನಲ್ಲಿ ಪದವಿ (B.E/B.Tech) ಪೂರ್ಣಗೊಳಿಸಿರಬೇಕು.
- ಅಂತಿಮ ವರ್ಷದ ಪರೀಕ್ಷೆ ಬರೆದು ಫಲಿತಾಂಶಕ್ಕಾಗಿ ಕಾಯುತ್ತಿರುವ ವಿದ್ಯಾರ್ಥಿಗಳು (15.06.2026 ರೊಳಗೆ ಫಲಿತಾಂಶ ಬರದಿದ್ದರೆ) ಕೂಡ ಅರ್ಜಿ ಸಲ್ಲಿಸಬಹುದು. ಆದರೆ ಅವರು 31.08.2026 ರೊಳಗೆ ತಮ್ಮ ಡಿಗ್ರಿ ಪ್ರಮಾಣಪತ್ರವನ್ನು ಒದಗಿಸುವುದು ಕಡ್ಡಾಯವಾಗಿರುತ್ತದೆ.
ವಯೋಮಿತಿ:
- ಅರ್ಜಿ ಸ್ವೀಕರಿಸುವ ಕೊನೆಯ ದಿನಾಂಕಕ್ಕೆ ಅಂದರೆ 15-06-2026 ಕ್ಕೆ ಅನ್ವಯವಾಗುವಂತೆ ಅಭ್ಯರ್ಥಿಯ ಗರಿಷ್ಠ ವಯಸ್ಸು 30 ವರ್ಷಗಳು ಮೀರಿರಬಾರದು.
- ವಯೋಮಿತಿ ಸಡಿಲಿಕೆ: ಒಬಿಸಿ (OBC) ಅಭ್ಯರ್ಥಿಗಳಿಗೆ 3 ವರ್ಷ, ಎಸ್ಸಿ/ಎಸ್ಟಿ (SC/ST) ಅಭ್ಯರ್ಥಿಗಳಿಗೆ 5 ವರ್ಷ, ಮತ್ತು ಅಂಗವಿಕಲ (PwBD) ಅಭ್ಯರ್ಥಿಗಳಿಗೆ 10 ರಿಂದ 15 ವರ್ಷಗಳವರೆಗೆ ಸಡಿಲಿಕೆ ಇರಲಿದೆ.
ಅರ್ಜಿ ಶುಲ್ಕ:
- ಈ ನೇಮಕಾತಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಆಯ್ಕೆ ಪ್ರಕ್ರಿಯೆ:
- ಕೇವಲ ಗೇಟ್-2026 (GATE-2026) ಪರೀಕ್ಷೆಯಲ್ಲಿ (ಸಿವಿಲ್ ಇಂಜಿನಿಯರಿಂಗ್ ವಿಷಯದಲ್ಲಿ) ಅಭ್ಯರ್ಥಿಗಳು ಗಳಿಸಿರುವ ಸ್ಕೋರ್ನ (ಅಂಕಗಳ) ಆಧಾರದ ಮೇಲೆ ನೇರವಾಗಿ ಆಯ್ಕೆ ಮಾಡಲಾಗುವುದು. ಯಾವುದೇ ಪ್ರತ್ಯೇಕ ಲಿಖಿತ ಪರೀಕ್ಷೆ ಅಥವಾ ಸಂದರ್ಶನ ಇರುವುದಿಲ್ಲ.
ಅರ್ಜಿ ಸಲ್ಲಿಸುವ ವಿಧಾನ:
- ಅಭ್ಯರ್ಥಿಗಳು NHAI ಅಧಿಕೃತ ವೆಬ್ಸೈಟ್ಗೆ (nhai.gov.in) ಭೇಟಿ ನೀಡಿ ಆನ್ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬೇಕು.
- ಆನ್ಲೈನ್ ಅರ್ಜಿಯಲ್ಲಿ ಕೇಳಲಾಗಿರುವ ನಿಮ್ಮ ವೈಯಕ್ತಿಕ ವಿವರಗಳು, GATE-2026 ನೋಂದಣಿ ಸಂಖ್ಯೆ ಮತ್ತು ಸ್ಕೋರ್, ಹಾಗೂ ಶೈಕ್ಷಣಿಕ ಮಾಹಿತಿಯನ್ನು ತಪ್ಪಿಲ್ಲದೆ ಭರ್ತಿ ಮಾಡಿ.
- ನಿಮ್ಮ 10ನೇ ತರಗತಿ ಅಂಕಪಟ್ಟಿ, ಸಿವಿಲ್ ಇಂಜಿನಿಯರಿಂಗ್ ಪದವಿಯ ಅಂಕಪಟ್ಟಿ/ಪ್ರಮಾಣಪತ್ರ, GATE-2026 ಸ್ಕೋರ್ ಕಾರ್ಡ್, ಮತ್ತು ಜಾತಿ ಪ್ರಮಾಣಪತ್ರಗಳನ್ನು ಸ್ಕ್ಯಾನ್ ಮಾಡಿ ಪಿಡಿಎಫ್ (PDF) ರೂಪದಲ್ಲಿ ಅಪ್ಲೋಡ್ ಮಾಡಬೇಕು.
- ಇತ್ತೀಚಿನ ಭಾವಚಿತ್ರ ಮತ್ತು ಸಹಿಯನ್ನು ಜೆಪಿಇಜಿ (JPG/JPEG) ಫಾರ್ಮ್ಯಾಟ್ನಲ್ಲಿ ಅಪ್ಲೋಡ್ ಮಾಡಿ.
- ಎಲ್ಲಾ ವಿವರಗಳನ್ನು ಖಚಿತಪಡಿಸಿಕೊಂಡು ಅಂತಿಮವಾಗಿ ಅರ್ಜಿಯನ್ನು ಸಬ್ಮಿಟ್ (Submit) ಮಾಡಿ ಮತ್ತು ಭವಿಷ್ಯದ ಉಲ್ಲೇಖಕ್ಕಾಗಿ ಅರ್ಜಿಯ ಪ್ರಿಂಟ್ ತೆಗೆದುಕೊಳ್ಳಿ.
ಪ್ರಮುಖ ದಿನಾಂಕಗಳು:
- ಆನ್ಲೈನ್ ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ: 15-05-2026.
- ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15-06-2026.
ಪ್ರಮುಖ ಲಿಂಕ್ಗಳು:
- ಅಧಿಕೃತ ಅಧಿಸೂಚನೆ: ಡೌನ್ಲೋಡ್
- ಆನ್ಲೈನ್ ಅರ್ಜಿ: Apply ಮಾಡಿ
- ಅಧಿಕೃತ ವೆಬ್ಸೈಟ್: nhai.gov.in
ಇತರೆ ಉದ್ಯೋಗ ಮಾಹಿತಿಗಳನ್ನು ಓದಿರಿ
KEA Recruitment 2026: 06 ಪ್ರಥಮ ಮತ್ತು ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ
CESCOM Recruitment 2026: 200 ಪದವಿ ಮತ್ತು ಡಿಪ್ಲೊಮಾ ಅಪ್ರೆಂಟಿಸ್ ಹುದ್ದೆಗಳಿಗೆ ಆನ್ಲೈನ್ ಅರ್ಜಿ ಸಲ್ಲಿಸಿ