ರಾಷ್ಟ್ರೀಯ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಂಸ್ಥೆಯು (NIELIT) ಅಖಿಲ ಭಾರತ ಮಟ್ಟದಲ್ಲಿ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಿದೆ.
ಪ್ರಾಧ್ಯಾಪಕ, ಸಹ ಪ್ರಾಧ್ಯಾಪಕ ಹಾಗೂ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ನಿಗದಿತ ನಮೂನೆಯಲ್ಲಿ ಜೂನ್ 01, 2026 ರೊಳಗೆ ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
NIELIT Recruitment 2026 ಸಂಕ್ಷಿಪ್ತ ವಿವರ:
- ನೇಮಕಾತಿ ಸಂಸ್ಥೆ: ರಾಷ್ಟ್ರೀಯ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಂಸ್ಥೆ (NIELIT)
- ಒಟ್ಟು ಹುದ್ದೆಗಳ ಸಂಖ್ಯೆ: 57
- ವೇತನ ಶ್ರೇಣಿ: 60,000 ರೂ ರಿಂದ 1,40,000 ರೂ.
- ಹುದ್ದೆಯ ಸ್ಥಳ: All India
ಹುದ್ದೆಗಳ ವಿವರ:
- ಸಹಾಯಕ ಪ್ರಾಧ್ಯಾಪಕರು – 50
- ಸಹ ಪ್ರಾಧ್ಯಾಪಕರು (ಅಸೋಸಿಯೇಟ್ ಪ್ರೊಫೆಸರ್) – 18
- ಪ್ರಾಧ್ಯಾಪಕರು – 07
ವೇತನ ವಿವರ:
- ಸಹಾಯಕ ಪ್ರಾಧ್ಯಾಪಕರು – ರೂ. 60,000 ರಿಂದ ರೂ. 70,000/-
- ಸಹ ಪ್ರಾಧ್ಯಾಪಕರು – ರೂ. 1,10,000 ರಿಂದ ರೂ. 1,20,000/-
- ಪ್ರಾಧ್ಯಾಪಕರು – ರೂ. 1,30,000 ರಿಂದ ರೂ. 1,40,000/-
ಶೈಕ್ಷಣಿಕ ಅರ್ಹತೆ:
- ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಬಿಇ/ಬಿ.ಟೆಕ್, ಎಂಇ/ಎಂ.ಟೆಕ್, ಸ್ನಾತಕೋತ್ತರ ಪದವಿ, ಎಂಸಿಎ, ಅಥವಾ ಪಿಎಚ್‌ಡಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
- ಅಭ್ಯರ್ಥಿಯ ಗರಿಷ್ಠ ವಯಸ್ಸು 50 ವರ್ಷಗಳು ಮೀರಿರಬಾರದು.
- ವಯೋಮಿತಿ ಸಡಿಲಿಕೆಯು ಸಂಸ್ಥೆಯ ನಿಯಮಗಳ ಪ್ರಕಾರ ಅನ್ವಯವಾಗುತ್ತದೆ.
ಅರ್ಜಿ ಶುಲ್ಕ:
- ಅರ್ಹ ಅಭ್ಯರ್ಥಿಗಳು ರೂ. 500/- ನೋಂದಣಿ ಶುಲ್ಕವನ್ನು ಪಾವತಿಸಬೇಕಿರುತ್ತದೆ.
ಆಯ್ಕೆ ಪ್ರಕ್ರಿಯೆ:
- ದಾಖಲಾತಿಗಳ ಪರಿಶೀಲನೆ ಹಾಗೂ ನೇರ ಸಂದರ್ಶನದ (Interaction) ಮೂಲಕ ಅಭ್ಯರ್ಥಿಗಳನ್ನು ಶಾರ್ಟ್‌ಲಿಸ್ಟ್ ಮಾಡಿ ಆಯ್ಕೆ ಮಾಡಲಾಗುತ್ತದೆ.
- ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿಯು ಒಂದು ವರ್ಷದವರೆಗೆ ಚಾಲ್ತಿಯಲ್ಲಿರುತ್ತದೆ.
ಅರ್ಜಿ ಸಲ್ಲಿಸುವ ವಿಧಾನ:
- ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ನಿಂದ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಳ್ಳಬೇಕು.
- ಅರ್ಜಿಯನ್ನು ಸಂಪೂರ್ಣವಾಗಿ ಭರ್ತಿ ಮಾಡಿ, ಇತ್ತೀಚಿನ ಛಾಯಾಚಿತ್ರವನ್ನು ಲಗತ್ತಿಸಬೇಕು.
- ಶೈಕ್ಷಣಿಕ ದಾಖಲೆಗಳು, ವಯಸ್ಸಿನ ಪುರಾವೆ, ಹಾಗೂ ಅನುಭವದ ಪ್ರಮಾಣಪತ್ರಗಳನ್ನು ಸ್ವಯಂ-ದೃಢೀಕರಿಸಿ ಅರ್ಜಿಯೊಂದಿಗೆ ಸೇರಿಸಬೇಕು.
- ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಿನ ವಿಳಾಸಕ್ಕೆ ರಿಜಿಸ್ಟರ್ ಪೋಸ್ಟ್ ಅಥವಾ ಸ್ಪೀಡ್ ಪೋಸ್ಟ್ ಮೂಲಕ ಕಳುಹಿಸಬೇಕು.
ಅರ್ಜಿ ಕಳುಹಿಸಬೇಕಾದ ವಿಳಾಸ: ರಿಜಿಸ್ಟ್ರಾರ್, ರಾಷ್ಟ್ರೀಯ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಂಸ್ಥೆ (NIELIT), NIELIT ಭವನ, ಪ್ಲಾಟ್ ಸಂಖ್ಯೆ 3, PSP ಪಾಕೆಟ್, ಸಾಂಸ್ಥಿಕ ಪ್ರದೇಶ ಸೆಕ್ಟರ್-8, ದ್ವಾರಕಾ, ನವದೆಹಲಿ-110077.
ಪ್ರಮುಖ ದಿನಾಂಕಗಳು:
- ಆಫ್‌ಲೈನ್ ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ: 19-05-2026
- ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 01-06-2026
ಪ್ರಮುಖ ಲಿಂಕ್‌ಗಳು:
ಇತರೆ ಉದ್ಯೋಗ ಮಾಹಿತಿಗಳನ್ನು ಓದಿರಿ
ಉಡುಪಿ ಕೊಚ್ಚಿನ್ ಶಿಪ್‌ಯಾರ್ಡ್‌ನಲ್ಲಿ ಉದ್ಯೋಗಾವಕಾಶ; ವೇತನ 49,500 ರೂ.